ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಬಂದ್ : ಬಂದ್ ನಿಂದಾಗುವ ನಷ್ಟಕ್ಕೆ ಆಯೋಜಕರೆ ಹೊಣೆ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಮರಾಠ ನಿಗಮ ರಚನೆ ನಿರ್ಧಾರ ವಿರೋಧಿಸಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯದಾದ್ಯಂತ ಬಂದ್ ಗೆ ಕರೆ ನೀಡಿವೆ.

ಈ ಬಂದ್ ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

ಬಂದ್ ಆಚರಿಸುವವರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಲೆಟ್ಸ್ ಕಿಡ್ ಫೌಂಡೇಷನ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್. ಓಕ್ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ''ಈ ಬಂದ್ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ.

ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,''ಎಂದು ಹೇಳಿದೆ.

Edited By : Nirmala Aralikatti
PublicNext

PublicNext

05/12/2020 07:20 am

Cinque Terre

109.87 K

Cinque Terre

11

ಸಂಬಂಧಿತ ಸುದ್ದಿ