ಬೆಂಗಳೂರು: ಕುದುರೆ ರೇಸ್ ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ನೀಡಿದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛಾಟಿ ಏಟು ಕೊಟ್ಟಿದೆ.
ಡಿಸೆಂಬರ್ 16ರಿಂದ ಆನ್‌ಲೈನ್ ಬೆಟ್ಟಿಂಗ್‌ಗೆ ಅವಕಾಶ ನೀಡಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬೆಂಗಳೂರಿನ ಶಾಂತಿನಗರದ ನಿವಾಸಿ ಸಿ.ಗೋಪಾಲ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಕುರಿತು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿ, ಕುದುರೆ ರೇಸ್ ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ಹೇಗೆ ಕೊಟ್ರಿ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೇ ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ನೀಡಲು ಸರ್ಕಾರಕ್ಕೆ ಯಾವುದೇ ಅಧಿಕಾರವೂ ಇಲ್ಲ ಎಂದು ಹೇಳಿದೆ.
PublicNext
05/12/2020 05:25 pm