ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋ ವಧೆಗೆ 7 ವರ್ಷ ಸಜೆ , 5 ಲಕ್ಷದವರೆಗೆ ದಂಡ

ಬೆಂಗಳೂರು: ದೇಶದಲ್ಲಿ ಗೋವಿಗೆ ಸಾಕಷ್ಟು ಗೌರವವಿದೆ ಹಾಗಾಗಿ ಗೋ ಹತ್ಯೆ ನಿಷೇಧಕ್ಕಾಗಿ ಸಾಕಷ್ಟು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ ಗೋಹತ್ಯೆ ಮಾಡಿದವರಿಗೆ 7 ವರ್ಷದವರೆಗೆ ಜೈಲು ಮತ್ತು ಗರಿಷ್ಠ ₹10 ಲಕ್ಷದವರೆಗೆ ದಂಡ ವಿಧಿಸುವ ‘ಕರ್ನಾಟಕ ಜಾನುವಾರು ವಧೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆ’ಗೆ ವಿರೋಧ ಪಕ್ಷಗಳ ಆಕ್ರೋಶ ಮತ್ತು ಸಭಾತ್ಯಾಗದ ಮಧ್ಯೆ ವಿಧಾನಸಭೆ ಬುಧವಾರ ಒಪ್ಪಿಗೆ ನೀಡಿತು.

ಮಸೂದೆಯ ಪ್ರಮುಖ ಅಂಶಗಳು:

*ಜಾನುವಾರು ವ್ಯಾಪ್ತಿಯಲ್ಲಿ ಹಸು,ಕರು, ಎಮ್ಮೆ, ಎತ್ತು ಸೇರಿವೆ. 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳು ಒಳಗೊಂಡಿವೆ.

* ಗೋಹತ್ಯೆ ಮಾಡಿದರೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ

*ಒಂದು ಜಾನುವಾರು ಹತ್ಯೆ ಮಾಡಿದರೆ ₹50 ಸಾವಿರದಿಂದ ₹5 ಲಕ್ಷದವರೆಗೆ ದಂಡ

* ಎರಡು ಅಥವಾ ಹೆಚ್ಚಿನ ಅಪರಾಧಕ್ಕೆ ₹1 ಲಕ್ಷದಿಂದ ₹10 ಲಕ್ಷ ದಂಡ ಮತ್ತು 7 ವರ್ಷ ಕಾರಾಗೃಹ ವಾಸ

*ಗೋ ಹತ್ಯೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ

* ಗೋ ರಕ್ಷಣೆಗೆ ಶ್ರಮಿಸುವವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ

* 13 ವರ್ಷಕ್ಕೆ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಕಡ್ಡಾಯ

* ಗೋಹತ್ಯೆಯ ಉದ್ದೇಶದಿಂದ ಹೊರ ರಾಜ್ಯಗಳಿಗೆ ಸಾಗಣೆ ನಿಷೇಧ

*ಸಬ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಗಳಿಗೆ ಪೂರ್ಣಾಧಿಕಾರ

* ಇನ್ಸ್ಪೆಕ್ಟರ್ ದರ್ಜೆಗಿಂತ ಮೇಲ್ಪಟ್ಟ ಪೊಲೀಸ್ ಅಧಿಕಾರಿಗೆ ಶೋಧಿಸುವ ಮತ್ತು ಜಪ್ತಿ ಮಾಡುವ ಅಧಿಕಾರ

* ವಶಕ್ಕೆ ಪಡೆದ ವಿಚಾರವನ್ನು ಕೂಡಲೇ ಉಪವಿಭಾಗಾಧಿಕಾರಿ ಮ್ಯಾಜಿಸ್ಟ್ರೇಟರ್ಗಳಿಗೆ ತಿಳಿಸಿ ಜಾನುವಾರು ಮುಟ್ಟುಗೋಲು ಹಾಕಿಕೊಳ್ಳುವುದು

*ಗೋಮಾಂಸ ವಶಕ್ಕೆ ಪಡೆದರೆ ಅದು ಮನುಷ್ಯನ ಉಪಭೋಗಕ್ಕೆ ಅಲ್ಲ ಎಂದು ಪರಿಗಣಿಸಿ ನಾಶಪಡಿಸಬಹುದು

* ವಶಕ್ಕೆ ತೆಗೆದುಕೊಂಡ ಹಸುಗಳನ್ನು ಹರಾಜು ಹಾಕಬಹುದು. ಸೆಕ್ಷನ್ 19 ರ ಪ್ರಕಾರ ವಶಕ್ಕೆ ಪಡೆದ ಹಸುಗಳನ್ನು ಆರೋಪಿಗಳಿಗೆ ವಾಪಸ್ ಮಾಡುವಂತಿಲ್ಲ

*ಸೆಷನ್ ನ್ಯಾಯಾಧೀಶರ ಹಂತದಲ್ಲೇ ಪ್ರಕರಣಗಳನ್ನು ವಿಲೇವಾರಿ ಮಾಡಬೇಕು. ಆರೋಪ ಸಾಬೀತಾದರೆ ಹಸು, ಸಾಗಣೆಗೆ ಬಳಸಿದ ವಾಹನ ಮತ್ತು ಜಾನುವಾರು ಕಟ್ಟಿಹಾಕಿದ್ದ ಸ್ಥಳ ಮುಟ್ಟುಗೋಲು ಹಾಕಿಕೊಳ್ಳಬಹುದು

*ಕರ್ನಾಟಕ ಸೊಸೈಟಿ ಕಾಯ್ದೆಯ ಪ್ರಕಾರ ನೋಂದಾಯಿತ ಸಂಸ್ಥೆಗಳಿಗೆ ಮಾತ್ರ ಗೋ ಶಾಲೆ ನಡೆಸಲು ಅವಕಾಶ

ಗೋಪೂಜೆ ಮಾಡಿದ ಸಚಿವ

ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ ಬಳಿಕ ಸಚಿವ ಪ್ರಭು ಚವ್ಹಾಣ್ ಅವರು ವಿಧಾನಸೌಧದ ಪೂರ್ವ ದ್ವಾರದಲ್ಲಿ ಗೋ ಪೂಜೆ ಮಾಡಿದರು.

Edited By : Nirmala Aralikatti
PublicNext

PublicNext

10/12/2020 11:50 am

Cinque Terre

63.65 K

Cinque Terre

8

ಸಂಬಂಧಿತ ಸುದ್ದಿ