ಶ್ರೀನಗರ: ಭಾರತೀಯ ಸೈನಿಕರ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ ದಾಳಿ ನಡೆಸಿದ್ದಾರೆ. ಈ ದಾಳಿಗೆ ಪ್ರತಿದಾಳಿ ನಡೆಸಿದ ಭಾರತೀಯ ಸೈನಿಕರು ಗುಂಡಿನ ಚಕಮಕಿ ನಡೆಸಿದ್ದಾರೆ. ಪರಿಣಾಮ ಪಾಕಿಸ್ತಾನದ ಐವರು ಸೈನಿಕರು ಬಲಿಯಾಗಿದ್ದಾರೆ. ಜೊತೆಗೆ ಮೂವರು ಗಾಯಗೊಂಡಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ ಎ ಸಿ)ಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಸುಮಾರು 2 ಗಂಟೆಗಳ ಕಾಲ ದಾಳಿ ನಡೆದಿದ್ದು ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ ಪಾಕಿಸ್ತಾನ 3,200 ಬಾರಿ ಕದನ ವಿರಾಮ ಉಲ್ಲಂಘಿಸಿದೆ.
PublicNext
11/12/2020 06:48 pm