ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇದನ್ನೇ ಬಂಡವಾಳವಾಗಿಸಿಕೊಂಡು ಪ್ರಯಾಣಿಕರಿಂದ ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿದ್ದ ಆಟೊ ಚಾಲಕರ ವಿರುದ್ಧ ಪೊಲೀಸರು 91 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಆಟೋ ಚಾಲಕರು ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹಾಗೂ ಕರೆದಲ್ಲಿಗೆ ಹೋಗದವರ ವಿರುದ್ಧ 29 ಪ್ರಕರಣ, ಮತ್ತು ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ದಕ್ಕೆ ಸಂಬಂಧಿಸಿದಂತೆ 62 ಪ್ರಕರಣ ಸೇರಿ ಒಟ್ಟು 91 ಪ್ರಕರಣಗಳನ್ನು ದಾಖಲಿಸಲಾಗಿದೆ.
PublicNext
14/12/2020 04:07 pm