ಮುಂಬೈ: ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಕಂಚಂದಾನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಚಂದಾನಿ ಪರ ವಕೀಲ ನಿತೀನ್ ಪ್ರಧಾನ್, "ವಿಕಾಸ್ ಅವರಿಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಅವರ ಬಂಧನವು ಸಂಪೂರ್ಣ ಅಧಿಕಾರದ ದುರುಪಯೋಗ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದೇವೆ. ಕಂಚಂದಾನಿ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಿಲ್ಲ" ಎಂದು ಹೇಳಿದ್ದಾರೆ. ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ (ಬುಧವಾರ) ನಡೆಸಲಿದೆ.
PublicNext
15/12/2020 05:49 pm