ದೆಹಲಿ: ನೂತನ ಕೃಷಿ ಕಾನೂನು ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರೈತರ ಮಧ್ಯದ ಸಂಘರ್ಷಕ್ಕೆ ಫುಲ್‌ಸ್ಟಾಪ್ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿದೆ.
ಸರ್ಕಾರ ಮತ್ತು ರೈತ ಸಂಘಟನೆ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ, ನ್ಯಾಯಾಧೀಶರಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಹ್ಮಣ್ಯನ್ ಒಳಗೊಂಡ ನ್ಯಾಯಪೀಠವು ಸೂಚನೆ ನೀಡಿದೆ.
ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿತ್ತು. ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠವು, ಪ್ರತಿಭಟನೆಯಲ್ಲಿ ತೊಡಗಿರುವ ರೈತ ಸಂಘಟನೆಗಳನ್ನು ಪ್ರತಿವಾದಿಗಳನ್ನಾಗಿ ಪರಿಗಣಿಸುವಂತೆ ತಿಳಿಸಿ, ತನಿಖೆಯನ್ನು ಗುರುವಾರಕ್ಕೆ ಮುಂದೂಡಿದೆ.
PublicNext
16/12/2020 06:38 pm