ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೃತ ಸರ್ಕಾರಿ ನೌಕರನ ವಿವಾಹಿತ ಪುತ್ರಿಯೂ ಅನುಕಂಪದ ಉದ್ಯೋಗ ಕೋರಲು ಅರ್ಹ: ಹೈಕೋರ್ಟ್

ಬೆಂಗಳೂರು: ಮೃತ ಸರ್ಕಾರಿ ನೌಕರನ ವಿವಾಹಿತ ಪುತ್ರಿ ಕೂಡ ಅನುಕಂಪದ ಆಧಾರದಲ್ಲಿ ಉದ್ಯೋಗ ಕೋರಲು ಅರ್ಹರು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಿವಾಹಿತೆ ಎಂಬ ಕಾರಣಕ್ಕೆ ಅನುಕಂಪದ ಉದ್ಯೋಗ ನೀಡಲು ನಿರಾಕರಿಸಿದ ಕೃಷಿ ಮಾರುಕಟ್ಟೆ ಇಲಾಖೆ ಕ್ರಮವನ್ನು ಪ್ರಶ್ನಿಸಿ ಭುವನೇಶ್ವರಿ ವಿ. ಪುರಾಣಿಕ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ವದ ಆದೇಶ ನೀಡಿದೆ.

ಮದುವೆಯಾಗಿದ್ದಾಳೆಂಬ ಕಾರಣಕ್ಕೆ ಅನುಕಂಪದ ಉದ್ಯೋಗ ನಿರಾಕರಿಸಲು ಆಗದು. ಇದು ಸಂವಿಧಾನಕ್ಕೆ ವಿರುದ್ಧವಾದ ನಡೆ ಮತ್ತು ಲಿಂಗ ತಾರತಮ್ಯಕ್ಕೆ ಎಡೆ ಮಾಡಿಕೊಡುತ್ತದೆ. ಮಗ ಅಥವಾ ಮಗಳೇ ಆಗಿರಲಿ ಅವರು ಮತ್ತು ಪೋಷಕರೊಂದಿಗಿನ ಸಂಬಂಧವನ್ನು ವಿವಾಹಗಳು ನಿರ್ಧರಿಸುವುದಿಲ್ಲ. ಬದಲಾಗುತ್ತಿರುವ ಸಮಯದಲ್ಲಿ ಕಾನೂನಿನ ವ್ಯಾಖ್ಯಾನವು ಬದಲಾವಣೆಗೆ ಒಳಪಟ್ಟಿದೆ ಎಂದು ನ್ಯಾ. ಎಂ. ನಾಗಪ್ರಸನ್ನ ಅಭಿಪ್ರಾಯಪಟ್ಟಿದ್ದಾರೆ.

ವಿವಾಹಿತ ಪುತ್ರ ಅನುಕಂಪದ ಉದ್ಯೋಗ ಕೋರಲು ಅರ್ಹವಾಗಿರುವಾಗ, ವಿವಾಹಿತ ಪುತ್ರಿಯೂ ಅರ್ಹಳು. ಹೀಗಾಗಿ ಅರ್ಜಿದಾರರ ಹಕ್ಕನ್ನು ಮರುಪರಿಶೀಲನೆ ನಡೆಸಿ ಒಂದು ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Edited By : Vijay Kumar
PublicNext

PublicNext

17/12/2020 07:24 am

Cinque Terre

58.72 K

Cinque Terre

13

ಸಂಬಂಧಿತ ಸುದ್ದಿ