ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಜೈನ್ ನಿವಾಸಕ್ಕೆ ತೆರಳಿರುವ ಅಧಿಕಾರಿಗಳು, ಕೋಲ್ಕತ್ತಾ ಮೂಲದ ಕಂಪನಿಯೊಂದರ ಹವಾಲ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿ ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ. ಜೈನ್ ಅವರನ್ನು ಕಳೆದ ವಾರ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬಳಿಕ ದೆಹಲಿ ನ್ಯಾಯಾಲಯ ಅವರನ್ನು ಜೂನ್ 9ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
PublicNext
06/06/2022 10:33 am