ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ಬೆಳಗಾವಿ ಗೋವಾ ಗಡಿಯಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.ಇಷ್ಟು ದಿನ ಡಬಲ್ ಡೋಸ್ ವಾಕ್ಸಿನೇಷನ್ ಆದವರಿಗೆ ಪ್ರವೇಶ ಇತ್ತು ಆದ್ರೆ ಇನ್ನು ಮುಂದೆ RTPCR ನೆಗೆಟಿವ್ ರಿಪೋರ್ಟ್ ಇಲ್ಲದೇ ಬೆಳಗಾವಿಗೆ ಪ್ರವೇಶವಿಲ್ಲ ಎಂದು ನಿಯಮ ಮಾಡಲಾಗಿದೆ.
ಜಿಲ್ಲೆಯ 23 ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆ ಸಿಬ್ಬಂದಿಗಳು ತೀವ್ರ ತಪಾಸಣೆ ಮಾಡುತ್ತಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 634 ಆಕ್ಟಿವ್ ಕೇಸ್ ಪತ್ತೆಯಾಗಿದ್ದು. ಮುಂಜಾಗ್ರತಾ ಕ್ರಮವಾಗಿ 1 ರಿಂದ 9 ನೇ ತರಗತಿವರೆಗೆ ಶಾಲೆಯನ್ನು ಜಿಲ್ಲಾಡಳಿತ ಬಂದ್ ಮಾಡಿದೆ.
PublicNext
11/01/2022 12:52 pm