ಬೆಳಗಾವಿ: ಬೆಳಗಾವಿ ನಗರದಲ್ಲಿ ದಿನೇದಿನೇ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿವೆ. ಇದೆಲ್ಲ ಗೊತ್ತಿದ್ದರೂ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ, ಎಮ್ಮೆ ಓಡಿಸುವ ಸ್ಪರ್ಧೆ ಆಯೋಜಿಸಿ ಕೊರೊನಾ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
ಮಕರಣ ಸಂಕ್ರಮಣ ನಿಮಿತ್ತ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗೆ ಅನಿಲ್ ಬೆನಕೆ ಅವರೇ ಚಾಲನೆ ನೀಡಿದ್ದಾರೆ. ಈ ವೇಳೆ ವೇದಿಕೆ ಕಾರ್ಯಕ್ರಮ ನಡೆಯುವಾಗ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವೂ ಇಲ್ಲದೇ ನೂರಾರು ಜನ ಒಂದೇ ಕಡೆ ಸೇರಿದ್ದಾರೆ. ನಿನ್ನೆ ಶುಕ್ರವಾರ ಸಂಜೆ ನಗರದ ಚವ್ಹಾಟ ಗಲ್ಲಿಯಲ್ಲಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಚವಾಟ ಯುವಕ ಸಂಘಟನೆ, ಪಂಚ ಸಮಿತಿ, ಗವಳಿ ಸಮಾಜದಿಂದ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತ ಪಕ್ಷದ ಶಾಸಕರಿಂದಲೇ ನಿಯಮ ಉಲ್ಲಂಘನೆ ಆದ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
PublicNext
15/01/2022 10:47 pm