ಮುಂಬೈ: ಬಾಲಿವುಡ್ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಬಾಲಿವುಡ್ನ ನಟಿ, ಕಾಮಿಡಿಯನ್ ಭಾರ್ತಿ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಅವರಿಗೆ ಜಾಮೀನು ಸಿಕ್ಕಿರುವುದು ಇಬ್ಬರು ತನಿಖಾಧಿಕಾರಿಗಳಿಗೆ ಮುಳುವಾಗಿದೆ.
ಆರೋಪಿಗಳ ವಿರುದ್ಧ ಪ್ರಬಲವಾದ ಸಾಕ್ಷ್ಯಾಧಾರ ಇದ್ದರೂ ಕೋರ್ಟ್‌ಗೆ ಸೂಕ್ತ ಸಾಕ್ಷ್ಯಗಳನ್ನು ಒದಗಿಸಲಿಲ್ಲ. ತನಿಖೆಯನ್ನು ಸರಿಯಾಗಿ ಮಾಡದೇ ಕೋರ್ಟ್ ಜಾಮೀನು ನೀಡಲು ಕಾರಣವಾಯಿತು ಎಂಬ ಕಾರಣಕ್ಕೆ ತನಿಖಾ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಭಾರ್ತಿ ಸಿಂಗ್ ಮುಂಬೈನ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಪ್ರಕರಣದ ಸಂಬಂಧ ಭಾರ್ತಿ ಅವರನ್ನು ಅಂದೇ ಬಂಧಿಸಲಾಗಿತ್ತು. ಇತ್ತ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ವಿಚಾರಣೆಗೆ ಒಳಪಡಿಸಿ ಮಾರನೆಯ ದಿನ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
PublicNext
03/12/2020 03:45 pm