ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಸಂಜನಾ ಜಾಮೀನು ಅರ್ಜಿ ಡಿ.7ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸದ್ಯ ಪರಪ್ಪನ ಅಗ್ರಹಾರದ ಅತಿಥಿಯಾದ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಡಿ.7ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು.

ಈ ವೇಳೆ ಆರೋಪಿ ನಟಿ ಪರ ಹಿರಿಯ ವಕೀಲ ಹಸ್ಮತ್ ಪಾಷಾ ವಾದ ಮಂಡಿಸಿ, ಸಂಜನಾಗೆ ಅನಾರೋಗ್ಯ ಸಮಸ್ಯೆ ಇದೆ.

2018ರಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗಿದ್ದರು. 2019ರಿಂದ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ.

ಅವರಿಗೆ ಚಳಿಗಾಲದಲ್ಲಿ ಸಮಸ್ಯೆ ಉಲ್ಬಣಿಸಲಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇನ್ನು ಸರ್ಕಾರದ ಪರ ವಾದ ಮಂಡಿಸಿದ ಎಸ್ ಪಿಪಿ ವೀರಣ್ಣ ತಿಗಡಿ ಅವರು, ಆರೋಪಿಗೆ ಈಗಾಗಲೇ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ಜಾಮೀನು ತಿರಸ್ಕರಿಸಿವೆ. ಆಗಲೂ ಅನಾರೋಗ್ಯದ ನೆಪ ಒಡ್ಡಿದ್ದರು.

ಸೂಕ್ತ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಬಹುದು. ಅದಕ್ಕಾಗಿ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಆರೋಪಿ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದರು.

Edited By : Nirmala Aralikatti
PublicNext

PublicNext

04/12/2020 08:28 pm

Cinque Terre

71.66 K

Cinque Terre

1