ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಬಲವಂತಕ್ಕೆ ಮಣಿದು ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ'- ಹೊಸ ದೂರು ದಾಖಲು

ಬೆಂಗಳೂರು:​ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಆದರೆ ಸಂಜನಾ ಜೈಲಿನಲ್ಲಿದ್ದಾಗ ಆಕೆಯ ಬಗ್ಗೆ ಕೆಲ ವಿಚಾರಗಳು ಭಾರಿ ಚರ್ಚೆಗೆ ಕಾರಣವಾಗಿದ್ದವು. ಅದರಲ್ಲೂ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎನ್ನುವುದು ಭಾರೀ ಸದ್ದು ಮಾಡಿತ್ತು. ಇದೀಗ ಈ ಧರ್ಮ ಬದಲಾವಣೆಯ ಬಗ್ಗೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಬಲವಂತವಾಗಿ ಸಂಜನಾ ಗಲ್ರಾನಿ ಅವರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ ಆಕೆಗೆ ಮಹಿರಾ ಹೆಸರನ್ನು ಮರುನಾಮಕರಣ ಮಾಡಲಾಗಿತ್ತು. ಬೆಂಗಳೂರಿನ ಟ್ಯಾನರಿ ರಸ್ತೆಯ ದಾರುಲ್ ಉಲಮ್ ಶಾ ವಲಿಲುಲ್ಲಾ ಹೆಸರಿನ ಮೌಲ್ವಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿಕೊಂಡಿದ್ದರು ಎಂದು ದೂರು ದಾಖಲಿಸಲಾಗಿದೆ.

ವಕೀಲ ಅಮೃತೇಶ್​ ಅವರು ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ.

Edited By : Vijay Kumar
PublicNext

PublicNext

13/12/2020 05:29 pm

Cinque Terre

114.21 K

Cinque Terre

27

ಸಂಬಂಧಿತ ಸುದ್ದಿ