ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ. ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ಕೇಸ್ ಸಂಬಂಧ ವಾದ-ಪ್ರತಿವಾದ ಆಲಿಸಿದ ಎನ್‍ಡಿಪಿಎಸ್ ನ್ಯಾಯಾಲಯ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಪ್ರಕಟಿಸಿದೆ. ಹೀಗಾಗಿ ಇಂದಾದರೂ ಇಬ್ಬರು ನಟಿಯರಿಗೆ ಜಾಮೀನು ಸಿಗುತ್ತೇ ಎಂಬ ನಂಬಿಕೆ ಹುಸಿಯಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟೆಂಬರ್ 21ರಂದು ನಡೆಸಿತ್ತು. ವಿಚಾರಣೆಯ ಬಳಿಕ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದರು. ಇತ್ತ ಮತ್ತೋರ್ವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 24ರಂದು ನ್ಯಾಯಲಯ ಮುಂದೆ ಬಂದಿತ್ತು. ವಾದ- ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದು ಆದೇಶ ಕಾಯ್ದಿರಿಸಿದ್ದರು.
ವಿಶೇಷ ಕೋರ್ಟ್ ನ್ಯಾ. ಜಿ.ಎಂ.ಶೀನಪ್ಪ ಅವರು ಇಂದು ಆದೇಶ ಹೊರಡಿಸಿದ್ದಾರೆ. ಸಿಸಿಬಿ ತನಿಖೆ ಇನ್ನು ಪ್ರಾಥಮಿಕ ಹಂತದಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದುವರೆಗೂ ತಲೆಮರೆಸಿಕೊಂಡಿರುವ ಪ್ರಕರಣದ A1 ಆರೋಪಿ ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಯಿತು. ಮತ್ತೊಬ್ಬ ಆರೋಪಿ ವಿನಯ್ ಕುಮಾರ್ ಜಾಮೀನು ಅರ್ಜಿಯೂ ವಜಾಗೊಳಿಸಲಾಯಿತು.
ರವಿಶಂಕರ್, ಪ್ರಶಾಂತ್ ರಂಕ, ಅಭಿಸ್ವಾಮಿ, ವೈಭವ್ ಜೈನ್ ಮತ್ತು ಪ್ರಶಾಂತ್ ರಾಜು ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಲಾಗಿದೆ. ವಿರೇನ್ ಖನ್ನ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.
PublicNext
28/09/2020 04:42 pm