ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಮುಂದುವರಿಸಿ ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.
ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋಯಿಕ್ ಬಾಂಬೆ ಹೈಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ರಿಯಾ ಸೋದರನ ಪರ ವಕೀಲ ಸತೀಶ್ ಮನೆಶಿಂಧೆ ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ. ಈಗಾಗಲೇ 14 ದಿನಗಳ ಮುಂಬೈನ ಬೈಖುಲ್ಲಾ ಜೈಲಿನಲ್ಲಿರುವ ರಿಯಾ ಸೆರೆವಾಸ ಮುಂದುವರಿಯಲಿದ್ದು ಬಂಧನ ಅವಧಿಯನ್ನು ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ಅಕ್ಟೋಬರ್ 6 ರವರೆಗೆ ವಿಸ್ತರಿಸಿದೆ.
PublicNext
22/09/2020 03:53 pm