ನವದೆಹಲಿ: ಗಣರಾಜ್ಯೋತ್ಸವದ ದಿನದಂದು ನಡೆದ ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ನಟ ದೀಪ್ ಸಿಧು ಈಗ ವಿಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ತಮ್ಮನ್ನು ದೇಶದ್ರೋಹಿ ಎಂದು ಕರೆದ ರೈತ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದೀಪ್ ಸಿಧು ತಮ್ಮ ಫೇಸ್‌ಬುಕ್ ಖಾತೆಯಲ್ಲಿ 'ಸ್ಟ್ರೈಟ್ ಫ್ರಮ್ ಮೈ ಸೋಲ್' ಎಂಬ 15 ನಿಮಿಷಗಳ ಸುದೀರ್ಘ ವಿಡಿಯೋ ಪೋಸ್ಟ್ ಮಾಡಿ ಕಣ್ಣೀರಿಟ್ಟಿದ್ದಾರೆ. "ನನ್ನ ಇಡೀ ಜೀವನವನ್ನು ಬಿಟ್ಟು, ರೈತರ ಪ್ರತಿಭಟನೆಯಲ್ಲಿ ಸೇರಲು ಬಂದೆ. ಆದರೆ ನನಗೆ ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟಲಾಯಿತು. ನಾನು ಮಾಡಿದ್ದು ರೈತರ ಹಕ್ಕುಗಳಿಗಾಗಿ ಧ್ವನಿ ಎತ್ತಿದೆ. ಇಷ್ಟು ತಿಂಗಳುಗಳಿಂದ ರಸ್ತೆಗಳಲ್ಲಿ, ಡೇರೆಗಳಲ್ಲಿ ಎಲ್ಲರನ್ನೂ ಭೇಟಿಯಾಗಿದ್ದೇನೆ. ಈಗ ದೇಶದ್ರೋಹಿಯಾಗಿ ಮಾಡಲಾಗುತ್ತಿದೆ"ಎಂದು ಅಸಮಾಧಾನ ಹೊರ ಹಾಕಿದ್ದಾರೆ.
PublicNext
01/02/2021 08:08 am