ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೆರಿಗೆ ವಿನಾಯಿತಿ ಕೇಳಿದ್ದ ನಟ ಧನುಷ್ : ಛೀಮಾರಿ ಹಾಕಿದ ಕೋರ್ಟ್

ಚೆನ್ನೈ : ರಾಷ್ಟ್ರಪ್ರಶಸ್ತಿ ವಿಜೇತ ಕಾಲಿವುಡ್ ನಟ ಧನುಷ್ ವಿದೇಶದಿಂದ ಆಮದು ಮಾಡಿದ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿನ ಆಮದು ತೆರಿಗೆಯನ್ನು ಪ್ರಶ್ನಿಸಿ ಅರ್ಜಿ ಕೋರ್ಟ್ ಗೆ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ನಟರು ಜವಾಬ್ದಾರಿಯುತ ನಾಗರೀಕರಂತೆ ವರ್ತಿಸಬೇಕು. ಸಂಪೂರ್ಣವಾಗಿ ತೆರಿಗೆ ಪಾವತಿಸದೆ ತಮ್ಮ ಕಾರುಗಳನ್ನು ಚಲಾಯಿಸಬಾರದು ಎಂದು ಹೇಳಿದೆ.

‘ತೆರಿಗೆದಾರರ ಹಣವನ್ನು ಬಳಸಿಕೊಂಡು ನೀವು ರಸ್ತೆಗಳಲ್ಲಿ ಐಷಾರಾಮಿ ಕಾರನ್ನು ಓಡಿಸುತ್ತೀರಿ. ಹಾಲು ಮಾರಾಟಗಾರ ಮತ್ತು ದಿನಗೂಲಿ ಕಾರ್ಮಿಕರು ಕೂಡ ತಾವು ಖರೀದಿಸುವ ಪ್ರತಿ ಲೀಟರ್ ಪೆಟ್ರೋಲ್ ಗೆ ತೆರಿಗೆ ಪಾವತಿಸುತ್ತಿದ್ದಾರೆ. ಈ ವ್ಯಕ್ತಿಗಳು ತೆರಿಗೆ ವಿನಾಯಿತಿ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿಲ್ಲ’ ಎಂದು ಕೋರ್ಟ್ ಛಿಮಾರಿ ಹಾಕಿದೆ.

2015ರಲ್ಲಿ ಧನುಷ್ ರೋಲ್ಸ್ ರಾಯ್ಸ್ ಕಾರನ್ನು ವಿದೇಶದಿಂದ ಆಮದು ಮಾಡಿಕೊಂಡಿದ್ದರು. ಇದಕ್ಕೆ ಅವರು 60 ಲಕ್ಷ ರೂಪಾಯಿ ಎಂಟ್ರಿ ಟ್ಯಾಕ್ಸ್ ಪಾವತಿ ಮಾಡಬೇಕಿತ್ತು. ಧನುಷ್ ಅರ್ಧದಷ್ಟು ತೆರಿಗೆ ಪಾವತಿಸಿ ಉಳಿದಿದ್ದಕ್ಕೆ ವಿನಾಯಿತಿ ನೀಡುವಂತೆ ಕೋರಿದ್ದರು. ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎಸ್.ಎಂ. ಸುಬ್ರಮಣಿಯಮ್ ಅವರು ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ತೆರಿಗೆ ವಿನಾಯಿತಿ ನೀಡೋಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

05/08/2021 09:51 pm

Cinque Terre

74.56 K

Cinque Terre

3