ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಿಚಾರಣೆ ನಡೆಸಿದೆ. ಸತತ ಐದು ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ನಟರು ಮತ್ತು ನಿರ್ದೇಶಕರು ಸೇರಿದಂತೆ ಟಾಲಿವುಡ್ ನ ಪ್ರಮುಖ ಸ್ಟಾರ್ ಗಳಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಪುರಿ ಜಗನ್ನಾಥ್, ಜಾರ್ಮಿ ಕೌರ್, ಮುಮೈತ್ ಖಾನ್, ನವದೀಪ್ ಮತ್ತು ನಂದು ಅವರಿಗೂ ಇಡಿ ಸಮನ್ಸ್ ನೀಡಿತ್ತು.
ಕಿಚ್ಚ ಸುದೀಪ್ ಅಭಿನಯದ ಬಿಗ್ ಬಜೆಟ್ ಚಿತ್ರ ವಿಕ್ರಾಂತ್ ರೋಣದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಜಾಕ್ವೆಲಿನ್ ಅವರ ಪಾತ್ರದ ಫಸ್ಟ್ ಲುಕ್ ಸಹ ಬಿಡುಗಡೆಯಾಗಿತ್ತು.
PublicNext
30/08/2021 07:10 pm