ಮುಂಬೈ : ಕಳೆದ ವರ್ಷ ಜೂನ್ ನಲ್ಲಿ ಮೃತಪಟ್ಟ ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ಕಂಗನಾ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದರು ಎಂದು ಖ್ಯಾತ ಲೇಖಕ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ದೂರಿದ್ದಾರೆ. ಈ ಕುರಿತಂತೆ ನಟಿ ಕಂಗನಾ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಸೆಪ್ಟೆಂಬರ್ 14ಕ್ಕೆ ಮುಂದೂಡಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
ಟಿವಿ ಸಂದರ್ಶನಗಳಲ್ಲಿ ತಮ್ಮ ವಿರುದ್ಧ ಮಾನಹಾನಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಜಾವೇದ್ ಅಖ್ತರ್ ಆರೋಪಿಸಿದ್ದಾರೆ.
PublicNext
01/09/2021 04:46 pm