ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಗನ ಬಂಧನ.. ಅನ್ನ ನೀರು ಬಿಟ್ಟು ಚಿಂತಿತರಾದ ಶಾರೂಖ್ ದಂಪತಿ!

ಮುಂಬೈ: ಡ್ರಗ್ಸ್ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್ ಸ್ಥಿತಿ ನೆನೆಯುತ್ತಾ ನಟ ಶಾರೂಖ್ ದಂಪತಿ ತೀರಾ ಚಿಂತೆಯಲ್ಲಿ ಮುಳುಗಿದ್ದಾರೆ. ಸರಿಯಾಗಿ ಊಟ ನೀರು ಸೇವಿಸದ ಕಿಂಗ್ ಖಾನ್ ಮಗನ ಬರುವಿಕೆಯನ್ನು ಕಾಯುತ್ತಿದ್ದಾರೆ.

ಇನ್ನು ಆರ್ಯನ್ ಆರೋಗ್ಯದ ಬಗ್ಗೆ ಎನ್ ಸಿಬಿ ಅಧಿಕಾರಿಗಳ ಬಳಿ ವಿಚಾರಿಸುತ್ತಾ ಶಾರೂಖ್ ದಂಪತಿ ರಾತ್ರಿಯಿಡೀ ನಿದ್ದೆಗೆಟ್ಟು ಕುಳಿತಿದ್ದಾರೆ.

ಮಗ ಜೈಲಿನಲ್ಲಿ ಹೇಗೆ ದಿನಗಳನ್ನು ಕಳೆಯುತ್ತಿದ್ದಾನೋ ಎಂಬ ಚಿಂತೆ ಆರ್ಯನ್ ಪೋಷಕರಿಗೆ ಹೀಗಾಗಿ ದಂಪತಿ ಮಗನ ಬಗ್ಗೆ ಯೋಚನೆ ಮಾಡುತ್ತಾ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಊಟ- ತಿಂಡಿಯೂ ಇಲ್ಲದಾಗಿದೆ. ಅಲ್ಲದೆ ಪದೇ ಪದೇ ಎನ್ ಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ ಎಂದು ಎಸ್ ಆರ್ ಕೆ ಆಪ್ತರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ನಿನ್ನೆ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಹೇಳಿದೆ. ಬುಧವಾರ ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಯಲಿದೆ.

Edited By : Nirmala Aralikatti
PublicNext

PublicNext

12/10/2021 06:01 pm

Cinque Terre

40.47 K

Cinque Terre

15