ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಗೆ ಇ.ಡಿ ಸಮನ್ಸ್

ಮುಂಬೈ: ಬಾಲಿವುಡ್ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಸಮನ್ಸ್ ನೀಡಿದೆ. ₹ 200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಮೂಲದ ಜಾಕ್ವೆಲಿನ್ ಮತ್ತು ಕೆನಡಾ ಮೂಲದ ನೂರಾ ಫತೇಹಿ ಅವರ ಹೆಸರು ಕೇಳಿಬಂದಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ಇ.ಡಿ ನಡೆಸಿತ್ತು. ನಟಿ ಹಾಗೂ ನೃತ್ಯಗಾರ್ತಿ ನೂರಾ ಫತೇಹಿ ಅವರು ಸಹ ಇ.ಡಿ ವಿಚಾರಣೆಗೆ ಒಳಪಟ್ಟಿದ್ದಾರೆ. ಹಣ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Edited By : Nirmala Aralikatti
PublicNext

PublicNext

14/10/2021 05:50 pm

Cinque Terre

48.13 K

Cinque Terre

1

ಸಂಬಂಧಿತ ಸುದ್ದಿ