ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

#MeToo ಕೇಸ್: ನಟಿ ಶೃತಿ ಹರಿಹರನ್‌ಗೆ ನೋಟಿಸ್

ಬೆಂಗಳೂರು: ಚಿತ್ರರಂಗದಲ್ಲಿ ತಲ್ಲಣ ಸೃಷ್ಟಿಸಿದ್ದ 'ಮೀಟೂ' ಪ್ರಕರಣಕ್ಕೆ ಸಂಬಂಧಿಸಿ ನಟಿ ಶೃತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದಾರೆ.

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ 2018ರಲ್ಲಿ ನಟಿ ಶೃತಿಹರಿಹರನ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೃತಿ ಹರಿಹರನ್ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ 354, 354ಚಿ ಮತ್ತು 506 ಐಪಿಸಿ ಅಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಮೂರು ವರ್ಷಗಳ ಬಳಿ ಇದೀಗ ಮತ್ತೆ ಮೀಟೂ ಪ್ರಕರಣ ಕುರಿತಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಶೃತಿ ಹರಿಹರನ್‌ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ನವೆಂಬರ್ 2015ರಲ್ಲಿ ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶೃತಿ ಹರಿಹರನ್ ಆರೋಪಿಸಿದ್ದರು. ಈ ಘಟನೆ ನಡೆದ ಎರಡು ವರ್ಷಗಳ ನಂತರ ಶೃತಿ ಹರಿಹರನ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.

Edited By : Vijay Kumar
PublicNext

PublicNext

28/11/2021 10:53 am

Cinque Terre

61.72 K

Cinque Terre

2

ಸಂಬಂಧಿತ ಸುದ್ದಿ