ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕರಿಗೆ ಥ್ರೆಟ್ Y ಕೆಟಗರಿ ಭದ್ರತೆ

ದೇಶದಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಉತ್ತಮ ಪ್ರದರ್ಶನದೊಂದಿಗೆ ಸಾಕಷ್ಟು ವಿವಾದಗಳಿಗೂ ಗುರಿಯಾಗಿದೆ. ಸಿನಿಮಾ ಮೆಚ್ಚಿಕೊಂಡವರು ಹಲವರಾದ್ರೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಚಿತ್ರ ಬಿಡುಗಡೆಯಾದಾಗಿನಿಂದ ಕೋಟಿ ಕೋಟಿ ಗಳಿಕೆಯತ್ತ ಮುನ್ನುಗುತ್ತಿದೆ.

1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಬಗ್ಗೆ ಸಿನಿಮಾದ ಕಥೆ ಹೆಣೆಯಲಾಗಿದೆ. ಇದರ ಮಧ್ಯೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಗೃಹ ಸಚಿವಾಲಯವು ವೈ ಕೆಟಗರಿ ಭದ್ರತೆ (Y security) ನೀಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾಗಿ ವಾರದ ಬಳಿಕ ತಮ್ಮ ಕುಟುಂಬಕ್ಕೆ ಬೆದರಿಕೆ ಇದು ಎಂದು ನಿರ್ದೇಶಕ ಅಗ್ನಿಹೋತ್ರಿ ಹೇಳಿದ್ದರು. ಇನ್ನು ಸಿನಿಮಾ ಬಿಡುಗಡೆಗೂ ಮೊದಲು ನಿರ್ದೇಶಕ ಅಗ್ನಿಹೋತ್ರಿ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು, ಅಲ್ಲದೆ ಈ ಸಿನಿಮಾ ಬಿಡುಗಡೆ ಮಾಡದಂತೆ ಬೆದರಿಕೆ ಕರೆಗಳು ಬಂದಿತ್ತು ಮತ್ತು ಅಸಭ್ಯ ಕರೆಗಳು ಬರುತ್ತಿದ್ದವು ಎಂದು ಅಗ್ನಿಹೋತ್ರಿ ಹೇಳಿಕೊಂಡಿದ್ದರು.

ಇದೀಗ ಸಿನಿಮಾ ಬಿಡುಗಡೆಯಾಗಿ ಅನೇಕ ದಿನಗಳ ಬಳಿಕ ನಿರ್ದೇಶಕರಿಗೆ ಭದ್ರತೆ ನೀಡಲಾಗಿದೆ. ಇತ್ತೀಚಿಗೆ ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿತ್ತು. ಇದೀಗ ವೈ ಕೆಟಗರಿ ಭದ್ರತೆ ಪಡೆಯುತ್ತಿರುವ ಬಾಲಿವುಡ್ ನ ಎರಡನೆ ವ್ಯಕ್ತಿ ಅಗ್ನಿಹೋತ್ರಿ ಆಗಿದ್ದಾರೆ.

Y ಕೆಟಗರಿ ಭದ್ರತೆ

ವಿವೇಕ್ ಅಗ್ನಿಹೋತ್ರಿ ಅವರಿಗೆ 'ವೈ' ಶ್ರೇಣಿಯಡಿ ಎಂಟು ಅಧಿಕಾರಿಗಳ ಭದ್ರತೆಯನ್ನು ನೀಡಲಾಗುವುದು. ಇದರಲ್ಲಿ 2 ಕಮಾಂಡೋಗಳು ಮತ್ತು ಇತರ ಪೊಲೀಸರು ಇರಲಿದ್ದಾರೆ.

Edited By : Nirmala Aralikatti
PublicNext

PublicNext

18/03/2022 03:08 pm

Cinque Terre

37.24 K

Cinque Terre

47

ಸಂಬಂಧಿತ ಸುದ್ದಿ