ಮುಂಬೈ: ನಟಿ ಸ್ವರಾ ಭಾಸ್ಕರ್ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ವರ್ಸೊವಾದಲ್ಲಿರುವ ನಟಿಯ ನಿವಾಸಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಈ ಸಂಬಂಧ ಎರಡು ದಿನಗಳ ಹಿಂದೆ ಸ್ವರಾ ಭಾಸ್ಕರ್ ಅವರು ವರ್ಸೊವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
'ವೀರ ಸಾವರ್ಕರ್ ಅವರಿಗೆ ಅವಮಾನ ಮಾಡುವುದನ್ನು ದೇಶದ ಯುವಕರು ಸಹಿಸುವುದಿಲ್ಲ' ಎಂದು ಹಿಂದಿಯಲ್ಲಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
PublicNext
29/06/2022 10:11 pm