ಲಕ್ನೋ: ಚುನಾವಣಾಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಂಬಂಧ ಬಾಲಿವುಡ್ ನಟ ಹಾಗೂ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರಿಗೆ ಲಕ್ನೋ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ಅದೇ ನ್ಯಾಯಾಲಯವು ಅವರಿಗೆ ಜಾಮೀನು ಸಹ ನೀಡಿದೆ. ಸರ್ಕಾರಿ ನೌಕರನೊಬ್ಬ ತನ್ನ ಕರ್ತವ್ಯ ನಿರ್ವಹಿಸದಂತೆ ತಡೆದ ಕಾರಣಕ್ಕೆ ಮತ್ತು ಇತರ ಮೂರು ಅಪರಾಧ ಎಸಗಿದ ಕಾರಣಗಳಿಗಾಗಿ ಬಬ್ಬರ್‌ಗೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯ ರಾಜ್ ಬಬ್ಬರ್ ಅವರಿಗೆ 6,500 ರೂಪಾಯಿ ದಂಡವನ್ನೂ ವಿಧಿಸಿದೆ.
ಏನಿದು ಪ್ರಕರಣ:
ಬಬ್ಬರ್ ಅವರು ಮೇ 1996ರಲ್ಲಿ ಸಮಾಜವಾದಿ ಪಕ್ಷದಿಂದ ಲಕ್ನೋ ಸ್ಥಾನಕ್ಕೆ ಲೋಕಸಭೆ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದರು. ಅವರು ತಮ್ಮ ಬೆಂಬಲಿಗರೊಂದಿಗೆ ಮತಗಟ್ಟೆ ಕೇಂದ್ರಕ್ಕೆ ನುಗ್ಗಿ, ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಪ್ರಕರಣದಲ್ಲಿ ಸೆಪ್ಟೆಂಬರ್ 23, 1996ರಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
PublicNext
08/07/2022 07:02 pm