ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಇಟಿ ರ‍್ಯಾಂಕಿಂಗ್‌ ಗೊಂದಲ; ಹೈಕೋರ್ಟ್ ತೀರ್ಪು ಪ್ರಶ್ನಿಸಲು ತೀರ್ಮಾನ

2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ‍್ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹೀಗಾಗಿ ಅದನ್ನು ಪ್ರಶ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜತೆ ಸೋಮವಾರ ಬೆಳಿಗ್ಗೆ ದೀರ್ಘ ಸಮಾಲೋಚನೆ ನಡೆಸಿ ಬಳಿಕ ಮಾತನಾಡಿದ ಅವರು ತೀರ್ಪಿತ್ತಿರುವ ಏಕ ಸದಸ್ಯ ಪೀಠದ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಮೇಲ್ಮನವಿ ಸಲ್ಲಿಸಬೇಕೋ ಎನ್ನುವುದನ್ನು ವಕೀಲರರು ತೀರ್ಮಾನಿಸುತ್ತಾರೆ. ತ್ವರಿತವಾಗಿ ಯಾವುದು ಆಗುತ್ತದೊ ಅದನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಕೋರ್ಟ್ ತೀರ್ಪನ್ನು ಪಾಲಿಸಲು ಹೋದರೆ ಈ ವರ್ಷ ಸಿಇಟಿ ಬರೆದಿರುವ 1.50 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಅವರ ರ‍್ಯಾಂಕ್ ಪಟ್ಟಿ ದೊಡ್ಡ ಪ್ರಮಾಣದಲ್ಲಿ ಏರುಪೇರಾಗುತ್ತದೆ. ಕೋರ್ಟ್ ಮೆಟ್ಟಿಲೇರಿದ್ದವರು ಯಾವುದೋ ಒಂದು ತಾಂತ್ರಿಕ ಅಂಶಕ್ಕೆ ಅಂಟಿಕೊಂಡಿದ್ದಾರೆ. ಹೋದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಕೈಗೊಂಡ ತೀರ್ಮಾನವನ್ನು ಅವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿತ್ತು ಎಂದರು.

ಹೋದ ವರ್ಷದ ವಿದ್ಯಾರ್ಥಿಗಳ ಬಗ್ಗೆ ನಮಗೆ ಅಸಮಾಧಾನವೇನಿಲ್ಲ. ನಾವು ಯಾರಿಗೂ ಅನ್ಯಾಯ ಆಗದಂತೆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಎಲ್ಲವೂ ನಿಗದಿತ ಕಾಲಮಿತಿಯಲ್ಲೇ ನಡೆಯಲಿದೆ ಎಂದರು.

Edited By :
PublicNext

PublicNext

05/09/2022 12:42 pm

Cinque Terre

41.4 K

Cinque Terre

1

ಸಂಬಂಧಿತ ಸುದ್ದಿ