ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.30ರಷ್ಟುಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಶೇ.70ರಷ್ಟುಬೋಧನಾ ಶುಲ್ಕ ಹೊರತುಪಡಿಸಿ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ 2021ರ ಜ.29ರಂದು ಆದೇಶಿಸಿತ್ತು.
ಶೇ.30 ರಷ್ಟು ಶುಲ್ಕ ಕಡಿತ ಮಾಡಿ ಆದೇಶವನ್ನು ಪ್ರಶ್ನಿಸಿದ್ದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿದ್ದವು. ಸದ್ಯ ಸರ್ಕಾರ, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ಕಡಿತ ಮಾಡುವಂತೆ ಆದೇಶ ಹೊರಡಿಸಿದೆ.
2020-21 ನೇ ಸಾಲಿನ ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕ ವಾಪಸ್ ಮಾಡುವಂತೆ ಶಾಲೆಗಳಿಗೆ ಸೂಚಿಸಿದೆ.
PublicNext
13/11/2021 08:05 am