ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಇದೇ ಸೋಮವಾರ ಅಂದ್ರೆ ನವೆಂಬರ್ 15ರಿಂದ ನಡೆಯಬೇಕಿದ್ದ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್‌ನಿಂದಾಗಿ ವಿವಿ ತರಗತಿಗಳು ಆನ್‌ಲೈನ್ ಮೂಲಕ ನಡೆದಿದ್ದವು. ಇದರಿಂದಾಗಿ ಕರ್ನಾಟಕ ಸರ್ಕಾರ ಹಾಗೂ ಯುಜಿಸಿ ಆದೇಶಗಳ ಅನುಸಾರವಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದಿರುವ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್‌ಗಳಿಗೆ ಬಡ್ತಿ ನೀಡಬೇಕೆಂದು ತಮ್ಮ ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿತ್ತು. ಇದರನ್ವಯ ರಾಜ್ಯದ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ, ಬೆಂಗಳೂರು ನಗರ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿದ್ದವು.

ಆದರೆ ಸರ್ಕಾರದ ಹಾಗೂ ಯುಜಿಸಿ ನಿಯಮಾವಳಿಗನುಸಾರವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ಮಾಡದೆ ತರಾತುರಿಯಲ್ಲಿ ಪರೀಕ್ಷಾ ದಿನಾಂಕವನ್ನು ಘೋಷಿಸುವ ಮೂಲಕ ಕರ್ನಾಟಕ ಕಾನೂನು ವಿವಿಯು ಎಲ್ಲ ನಿಯಮಾವಳಿಗಳನ್ನು ಕಡೆಗಣಿಸಿತ್ತು. ಈಗ ವಿವಿಯ ಈ ನಡೆಯನ್ನು ಪ್ರಶ್ನಿಸಿ ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್‌ನ ಮೊರೆ ಹೋಗಿದ್ದರು. ಶುಕ್ರವಾರದಂದು ವಿದ್ಯಾರ್ಥಿಗಳ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ ಕಿಣಗಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠವು ನವೆಂಬರ್ 15ರಂದು ಏಕಾಏಕಿ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದ ಕಾನೂನು ವಿವಿಯ ಪರೀಕ್ಷಾ ವೇಳಾಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ಆದೇಶವನ್ನು ಹೊರಡಿಸಿದೆ.

ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಈಗ ಡಿಸೆಂಬರ್ 20ರವರೆಗೆ ಯಾವುದೇ ತರಗತಿಯ ಪರೀಕ್ಷೆಯನ್ನು ನಡೆಸುವಂತಿಲ್ಲ. ಅಷ್ಟೇ ಅಲ್ಲದೆ ಇನ್ನಿತರ ಯಾವುದೇ ಅಧಿಸೂಚನೆಗಳನ್ನು ಹೊರಡಿಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇನ್ನೂ ಪ್ರಕರಣದ ಪ್ರಮುಖ ವಿಷಯವಾಗಿರುವ ಬಡ್ತಿ ವಿಚಾರವನ್ನು ಡಿಸೆಂಬರ್ 20ರಿಂದ ಸುದೀರ್ಘ ವಿಚಾರಣೆಗೆ ಒಳಪಡಿಸಲಿದೆ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಉಲ್ಲೇಖಿಸಿದೆ.

Edited By : Vijay Kumar
PublicNext

PublicNext

13/11/2021 03:45 pm

Cinque Terre

46.58 K

Cinque Terre

0

ಸಂಬಂಧಿತ ಸುದ್ದಿ