ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮವಸ್ತ್ರದ ಸಮರ : ಪೊಲೀಸರ ರಜೆ ರದ್ದು ಮರಳಿ ಕರ್ತವ್ಯಕ್ಕೆ ಹಾಜರು

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲಿನ ಗದ್ದಲು ತಾರಕಕ್ಕೇರಿರುವ ಬೆನ್ನಲ್ಲೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆವೊಂದನ್ನು ತರಲಾಗಿದೆ.

ಕಾಲೇಜು ವಿದ್ಯಾರ್ಥಿಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಲಭೆ,ಗದ್ದಲ,ಲಾಠಿಚಾರ್ಜ್ ನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವ ಬೆನ್ನಲ್ಲೆ ಪೊಲೀಸರ ರಜೆ ರದ್ದುಗೊಳಿಸಿ ಮರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ರಾಜ್ಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ 3 ದಿನ ರಜೆ ಘೋಷಿಸಲಾಗಿದೆ. ಆದರೆ ಎಂಜಿನಿಯರಿಂಗ್, ಸ್ನಾತಕೋತ್ತರ ಮತ್ತಿತರ ಪರೀಕ್ಷೆಗಳು ಎಂದಿನಂತೆ ನಡೆಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

08/02/2022 08:53 pm

Cinque Terre

85.37 K

Cinque Terre

4

ಸಂಬಂಧಿತ ಸುದ್ದಿ