ಬೆಂಗಳೂರು : ರಾಷ್ಟ್ರವ್ಯಾಪಿ ಚರ್ಚೆಯಾದ ರಾಜ್ಯದ ಹಿಜಾಬ್ ವಿವಾದಕ್ಕೆ ತೆರೆ ಎಳೆಯಲು ಹೈಕೋರ್ಟ್ ಸಜ್ಜಾಗಿದೆ.
ಸತತ 11 ದಿನಗಳ ಕಾಲ ವಾದ ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಸದ್ಯ ಹೈಕೋರ್ಟ್ ನ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ರವರ ಪೂರ್ಣ ಪೀಠ ತೀರ್ಪು ನೀಡಲಿದೆ.
ಜನವರಿ 31 ರಂದು ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಯಿತು. ಫೆಬ್ರವರಿ 3 ರಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಫೆಬ್ರವರಿ 9 ರಂದು ಪ್ರಕರಣ ಪೂರ್ಣ ಪೀಠಕ್ಕೆ ವರ್ಗಾವಣೆ ಮಾಡಲಾಯಿತು.
ಫೆಬ್ರವರಿ 11 ರಂದು ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಬಳಿಕ 11 ದಿನಗಳ ಕಾಲ ಕೋರ್ಟ್ನಲ್ಲಿ ಸುದೀರ್ಘ ವಿಚಾರಣೆ ನಡೆಸಲಾಯಿತು. ನಂತರ ಫೆಬ್ರವರಿ 25 ರಂದು ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್, ಇಂದು (ಮಾರ್ಚ್ 15) ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಲಿದೆ.
PublicNext
15/03/2022 10:30 am