ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

545 PSI ಗಳ ನೇಮಕಾತಿ ಅಕ್ರಮ : ತೂಗುಗತ್ತಿ ಕೆಳಗೆ ಅಭ್ಯರ್ಥಿಗಳು

ಬೆಂಗಳೂರು: 545 ಪಿಎಸ್ ಐ ಅಭ್ಯರ್ಥಿಗಳಿಗೆ ಚಿಂತೆವೊಂದು ಶುರುವಾಗಿದೆ. ಯಾರು ನ್ಯಾಯವಾಗಿ ಆಯ್ಕೆಯಾದವರು ಯಾರು ಅಕ್ರಮವಾಗಿ ಬಂದವರು ಎನ್ನುವ ಗೊಂದಲ ಶುರುವಾಗಿದೆ.ಹೌದು ರಾಜ್ಯದಲ್ಲಿ 545 ಸಬ್ ಇನ್ ಸ್ಪೆಕ್ಟರ್ ಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯ ಪೂರ್ವಾಪರ ಪರಿಶೀಲನೆ ನಡೆಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ.

545 ಎಸ್ ಐ ನೇಮಕಾತಿಯಲ್ಲಿ ಅಕ್ರಮ ಸಂಬಂಧ ಸಿಐಡಿ ತನಿಖೆ ಕುರಿತು ಭಾನುವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಅಭ್ಯರ್ಥಿ ಮತ್ತು ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ನೈಜ ಅಭ್ಯರ್ಥಿಗಳಿಗೆ ಯಾವುದೇ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ಭರವಸೆ ನೀಡಿದ್ದಾರೆ.

2021ರ ಅಕ್ಟೋಬರ್ 3ರಂದು ನಡೆದ 545 ಎಸ್ ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದೆ. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ಬಂದಿವೆ. ಈ ಕುರಿತು ಆಂತರಿಕ ತನಿಖೆ ನಡೆಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಕ್ರಮ ಕುರಿತು ಸಿಐಡಿ ತನಿಖೆಗೆ ಆದೇಶಿಸಿದರು. ಈ ಆಧಾರದ ಮೇಲೆ ಏ.9ರಂದು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡ ಸಿಐಡಿ ಅಧಿಕಾರಿಗಳು, ನಾಲ್ವರು ಅಭ್ಯರ್ಥಿಗಳು ಮತ್ತು ಮೂವರನ್ನು ಮೇಲ್ವಿಚಾರಕರನ್ನು ಬಂಧಿಸಿದ್ದಾರೆ.

ಸದ್ಯ ದೇಹದಾರ್ಢ್ಯ ಪರೀಕ್ಷೆ ಮುಗಿಸಿ ಲಿಖಿತ ಪರೀಕ್ಷೆಗೆ ಕಾಯುತ್ತಿರುವ 402 ಎಸ್ ಐ ಹುದ್ದೆಗಳ ನೇಮಕಾತಿ ಸದ್ಯಕ್ಕೆ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.

Edited By : Nirmala Aralikatti
PublicNext

PublicNext

17/04/2022 07:30 pm

Cinque Terre

192.17 K

Cinque Terre

3