ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಯುಸಿ-CET ಅಂಕ ಪರಿಗಣಿಸಿ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್ ಆದೇಶ

ಬೆಂಗಳೂರು : ಪಿಯುಸಿಯಲ್ಲಿ ಪಡೆದಿರುವ ಶೇ.50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪು ಪ್ರಕಟಿಸಿದೆ.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ರ‍್ಯಾಂಕ್ ಪಟ್ಟಿ ತಯಾರಿಸಲು ಈ ಮೇಲಿನ ನಿಯಮ ಪಾಲಿಸುವುದು ಕಡ್ಡಾಯವಾಗಿದೆ.

ನಿನ್ನೆ (ಶನಿವಾರ) ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ.

ಇನ್ನು ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಕೆಇಎ ಜು.30ರಂದು ಮಾಡಿದ್ದ ಆಕ್ಷೇಪಾರ್ಹವಾದ ಆದೇಶವನ್ನು ವಜಾ ಮಾಡಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

2020-21ನೆ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್.ಈಶ್ವರ್ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಲಾಗಿದೆ.

Edited By : Nirmala Aralikatti
PublicNext

PublicNext

04/09/2022 07:30 am

Cinque Terre

86.05 K

Cinque Terre

2

ಸಂಬಂಧಿತ ಸುದ್ದಿ