ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತಂತೆ ಏಕಸದಸ್ಯ ಪೀಠ ನೀಡಿರುವ ಆದೇಶದಿಂದಾಗಿ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಎಲ್ಲರಿಗೂ ಒಪ್ಪಿಗೆಯಾಗುವಂತಹ ಪರಿಹಾರ ಕಂಡುಕೊಳ್ಳುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೋಮವಾರದಂದು ಸಲಹೆ ಮಾಡಿದೆ.
2020-21 ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ತಿಳಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಜು.30ರಂದು ಹೊರಡಿಸಿದ್ದ ಟಿಪ್ಪಣಿ ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಹಂಗಾಮಿ ಸಿಜೆ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ಕೆಲ ಕಾಲ ಮೇಲ್ಮನವಿ ಆಲಿಸಿದ ಬಳಿಕ ನ್ಯಾಯಪೀಠ, ಸರ್ಕಾಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ಮಾಡಿತು. ಅದಕ್ಕೆ ಒಪ್ಪಿದ ಸರ್ಕಾರ ಸ್ವಲ್ಪ ಸಮಯಾವಕಾಶ ಕೋರಿತು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತಿಳಿಸಲು ಸಮಯಾವಕಾಶ ನೀಡಬೇಕೆಂದು ಕೋರಿದರು. ಆ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿ ಅಷ್ಟರಲ್ಲಿ ನಿಲುವು ತಿಳಿಸುವಂತೆ ಮೌಖಿಕ ಸೂಚನೆ ನೀಡಿತು.
PublicNext
20/09/2022 12:15 pm