ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಬಂದ್ ಹಿನ್ನೆಲೆ :ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ವಿವಿಧ ರೈತ ಸಂಘಗಳು ಹಾಗೂ ಇತರ ಸಂಘಟನೆಗಳು ಸೆ.28ರ ಸೋಮವಾರ ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸೆ.28ರಂದು ನಡೆಯಬೇಕಿದ್ದ ಎಸ್​​ಎಸ್​​ಎಲ್​​ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದು, ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತ ವಿಷಯದ ಪೂರಕ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ ಹಾಗೂ ಸೋಮವಾರ ನಡೆಯಬೇಕಿದ್ದ ಡಿಪ್ಲೋಮಾ ಪರೀಕ್ಷೆಗಳನ್ನು ಸಹ ಸೆಪ್ಟೆಂಬರ್ 30 ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರೈತ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Edited By :
PublicNext

PublicNext

27/09/2020 07:52 am

Cinque Terre

121.67 K

Cinque Terre

9

ಸಂಬಂಧಿತ ಸುದ್ದಿ