ದಾವಣಗೆರೆ: ದಾವಣಗೆರೆಯಲ್ಲಿ ಸದ್ಯಕ್ಕೆ ಹಿಜಾಬ್ ಗಲಾಟೆ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಇಂದೂ ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ತರಗತಿಗೆ ತೆರಳುವ ಮುನ್ನ ಹಿಜಾಬ್ ಬಿಚ್ಚಿಡುವಂತೆ ಸೂಚನೆ ನೀಡಿದರೂ ಕ್ಯಾರೇ ಎಂದಿಲ್ಲ.
ಎವಿಕೆ ಕಾಲೇಜ್ ಮುಂದೆ ಹೈಡ್ರಾಮಾವೇ ನಡೆದು ಹೋಯ್ತು. ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳ ಹೋಗುವಂತೆ ಮನವಿ ಮಾಡಿತು. ಆದ್ರೆ ನಾವು ಹಿಜಾಬ್ ತೆಗೆಯುವುದಿಲ್ಲ. ಹಿಜಾಬ್ ಧರಿಸಿ ಕ್ಲಾಸ್ ಕೇಳ್ತೀವಿ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಬಳಿಕ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಹೋದರು.
ವಿದ್ಯಾರ್ಥಿಗಳು ಪಟ್ಟು ಹಿಡಿಯುತ್ತಿದ್ದಂತೆ ಸ್ಥಳಕ್ಕೆ ವಿದ್ಯಾರ್ಥಿನಿಯರ ಪೋಷಕರು ಆಗಮಿಸಿದರು. ಈ ವೇಳೆ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆಯಿತು.
ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತು ವಿದ್ಯಾರ್ಥಿಗಳನ್ನು ಒಳಗೆ ಕರೆದುಕೊಂಡು ಹೋದ ಕಾಲೇಜು ಸಿಬ್ಬಂದಿ ಮನವೊಲಿಸುವ ಪ್ರಯತ್ನ ಮಾಡಿದರು. ಗಲಾಟೆ ಜೋರಾಗುವ ವಿಷಯ ತಿಳಿಯುತ್ತಿದ್ದಂತೆ ಮುನ್ನಚ್ಚರಿಕಾ ಕ್ರಮವಾಗಿ ಎವಿಕೆ ಕಾಲೇಜಿನ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
PublicNext
17/02/2022 04:04 pm