ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶ ರದ್ದು ಕೋರಿ, ‘ಸಂಸ್ಕೃತ ಭಾರತಿ ಟ್ರಸ್ಟ್’ ಹಾಗೂ ‘ಸಂಸ್ಕೃತ ಪ್ರಾಧ್ಯಾಪಕರ ಸಂಘ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಈ ವೇಳೆ ‘ಕನ್ನಡ ಕಲಿಯಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಬಲವಂತ ಮಾಡಬೇಡಿ’ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್, ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸುವ ಸರ್ಕಾರದ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.
ಕನ್ನಡ ಕಲಿಯಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಮುಂದಿನ ಆದೇಶದವರೆಗೂ ಕಡ್ಡಾಯಗೊಳಿಸುವುದು ಬೇಡ’ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದೆ.
PublicNext
17/12/2021 07:28 am