ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ!

ತುಮಕೂರು: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ತುಮಕೂರು ನಗರದ ತಿಲಕ್ ಪಾರ್ಕ್ ಸಮೀಪದ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿಯಾಗಿದ್ದಾರೆ.

2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್‍ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.

Edited By : Vijay Kumar
PublicNext

PublicNext

20/01/2022 07:42 am

Cinque Terre

35.22 K

Cinque Terre

5

ಸಂಬಂಧಿತ ಸುದ್ದಿ