ಯಾದಗಿರಿ: ಹೈಕೋರ್ಟ್ ಆದೇಶ ಬಂದರೂ ನಾವು ಹಿಜಾಬ್ ಧರಿಸುತ್ತೇವೆ. ನಾವು ಹೈಕೋರ್ಟ್ ತೀರ್ಪು ಪಾಲಿಸುವುದಿಲ್ಲ. ಹಿಜಾಬ್ ಧರಿಸಿಕೊಂಡೇ ಪರೀಕ್ಷೆ ಬರೆಯುತ್ತೇವೆ. ಒಂದು ವೇಳೆ ಪರೀಕ್ಷೆಗೆ ಅವಕಾಶ ನೀಡದಿದ್ದಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸುತ್ತೇವೆ ಎಂದು ಯಾದಗಿರಿಯ ಜ್ಯೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಸ್ರಾ ಹೇಳಿದ್ದಾರೆ.
ನಮಗೆ ಶಿಕ್ಷಣ ಹಾಗೂ ಹಿಜಾಬ್ ಕೂಡ ಮುಖ್ಯ. ಹಿಜಾಬ್ ತೆಗೆದು ಪರೀಕ್ಷೆ ಬರೆಯಬೇಕೆಂದರೆ ನಾವು ಪರೀಕ್ಷೆ ಬರೆಯಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಎಂದು ಅಸ್ರಾ ಒತ್ತಾಯಿಸಿದ್ದಾರೆ.
PublicNext
15/03/2022 01:52 pm