ಬೆಂಗಳೂರು : ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ 2021-22ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೊರಡಿಸಿದ್ದಾರೆ.
ಆದೇಶದನ್ವಯ, ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಇನ್ನು ಪರೀಕ್ಷಾ ಕೇಂದ್ರದ ಸುತ್ತ ಇರುವ ಜೆರಾಕ್ಸ್, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್‌ಗಳನ್ನ ಮುಚ್ಚುವಂತೆ ಆದೇಶದಲ್ಲಿ ಬರೆಯಲಾಗಿದೆ.
PublicNext
23/03/2022 07:34 am