ಗದಗ: ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಹಿನ್ನಲೆ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಜನ ಶಿಕ್ಷಕರನ್ನ ಅಮಾನತು ಮಾಡಲಾಗಿದೆ.
ಗದಗ ನಗರದ ಸಿ.ಎಸ್.ಪಾಟೀಲ್ ಬಾಲಕರ ಹಾಗೂ ಬಾಲಕಿಯರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ಗದಗ ಡಿಡಿಪಿಐ ಬಸವಲಿಂಗಪ್ಪ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಜನ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
PublicNext
30/03/2022 08:20 am