ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ. ಕೆ.ಆರ್ ವೇಣುಗೋಪಾಲ್ ನೇಮಕ: ಸುಪ್ರೀಂ ಕೋರ್ಟ್ ಅಸ್ತು

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರ ನೇಮಕಾತಿ ರದ್ದುಗೊಳಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಕರ್ನಾಟಕ ಹೈಕೋರ್ಟ್‌ನ ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆಯಿಂದ ಕುಲಪತಿ ಹುದ್ದೆಯಲ್ಲಿ ಮುಂದುವರೆಯಲು ಪ್ರೊ. ಕೆ.ಆರ್ ವೇಣುಗೋಪಾಲ್ ಅವರ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.

ಕಳೆದ ಮಾರ್ಚ್ 17ರಂದು ಹೈಕೋರ್ಟ್ ಆದೇಶವು ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಏಕಸದಸ್ಯ ಪೀಠವು ಪ್ರೊ ಕೆ.ಆರ್ ವೇಣುಗೋಪಾಲ್ ಅವರ ನೇಮಕ ಆದೇಶವನ್ನು ರದ್ದುಗೊಳಿಸಿತ್ತು. ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದೇ ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ಏಕಸದಸ್ಯ ಪೀಠವು ಆದೇಶದಲ್ಲಿ ತಿಳಿಸಿತ್ತು. ಇದಕ್ಕೆ ವಿರುದ್ಧವಾಗಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ನಿನ್ನೆ ಸೋಮವಾರ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

Edited By : Nagaraj Tulugeri
PublicNext

PublicNext

05/04/2022 03:30 pm

Cinque Terre

21.27 K

Cinque Terre

0

ಸಂಬಂಧಿತ ಸುದ್ದಿ