ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲಿದ್ದಲು ತಿಂದ ಮಾಜಿ ಸಚಿವ : ಅಪರಾಧಿ ಎಂದ ಕೋರ್ಟ್

ರಾಂಚಿ: ಜಾರ್ಖಂಡ್ ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ವಿಶೇಷ ನ್ಯಾಯಾಲಯ ಅಪರಾಧಿ ಎಂದು ಇಂದು ಘೋಷಿಸಿದೆ.

ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಬಂದಿದೆ.

ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು.

ದಿಲೀಪ್ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ ವಾಲ್ ಅವರೂ ದೋಷಿಗಳೆಂದು ಆದೇಶಿಸಲಾಗಿದೆ.

ಅಕ್ಟೋಬರ್ 14 ರಂದು ಹಗರಣ ಸಂಬಂಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭಾರತ್ ಪರಾಶರ್, ಶಿಕ್ಷೆಯ ಪ್ರಮಾಣ ಘೋಷಿಸಲಿದ್ದಾರೆ.

ಜಾರ್ಖಂಡ್ ನ ಗಿರಿದಿಹ್ ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999ರಲ್ಲಿ ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ.

Edited By : Nirmala Aralikatti
PublicNext

PublicNext

06/10/2020 02:08 pm

Cinque Terre

58.54 K

Cinque Terre

0

ಸಂಬಂಧಿತ ಸುದ್ದಿ