ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಿಳಾ ದೌರ್ಜನ್ಯಕ್ಕೆ ಕಡಿವಾಣ : ಯೋಗಿ ಸರ್ಕಾರದಿಂದ ನ್ಯೂ ಪ್ಲಾನ್

ಲರಾಮಪುರ : ಹಾಥರಸ್ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಮಹಿಳೆಯರ ಸುರಕ್ಷತೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿನೂತನ ಯೋಜನೆಯೊಂದನ್ನಾ ಜಾರಿಗೊಳಿಸಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಕ್ಕಾಗಿ ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ Mission Shakti ಯೋಜನೆಯನ್ನು ಜಾರಿಗೊಳಿಸಿದರು.

ಮಿಷನ್ ಶಕ್ತಿ ಪೊಲೀಸ್ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ.

ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ.

ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ತಿಳಿಸಿದರು.

Edited By : Nirmala Aralikatti
PublicNext

PublicNext

17/10/2020 06:22 pm

Cinque Terre

76.93 K

Cinque Terre

13

ಸಂಬಂಧಿತ ಸುದ್ದಿ