ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

75ನೇ ಸ್ವಾತಂತ್ರೋತ್ಸವ: ಪರೇಡ್ ಮೈದಾನಕ್ಕೆ ಕೋವಿಡ್ ನಿರ್ಬಂಧ

ಬೆಂಗಳೂರು: ರಾಜ್ಯದಾದ್ಯಂತ 75ನೇ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಒಂದು ಸಾವಿರ ಜನರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ.

ಶುಕ್ರವಾರ ಪಥಸಂಚಲನದ ಅಣಕು ಪ್ರದರ್ಶನ ವೀಕ್ಷಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಭಾನುವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿ , ಗೌರವ ವಂದನೆ ಸ್ವೀಕರಿಸಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ 1 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಂತರ ಮಾತನಾಡಿದ ಕಮಲ್ ಪಂತ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1 ಸಾವಿರದ 500 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.15 ಕೆಎಸ್ ಆರ್ ಪಿ, 10 ನಗರ ಸಶಸ್ತ್ರ ಪಡೆ ತುಕಡಿ ಜೊತೆಗೆ ಎರಡು ವಿಶೇಷ ಕಮಾಂಡೋ ತಂಡಗಳನ್ನು ಭದ್ರತೆಗಾಗಿ ನಿಯೋಜಿಸಲಾಗುವುದು, ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

14/08/2021 10:41 am

Cinque Terre

49.73 K

Cinque Terre

2