ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತದ ಕೊವಿಡ್ ಪರಿಹಾರ ಯೋಜನೆಗೆ ಸುಪ್ರೀಂ ಶ್ಲಾಘನೆ

ನವದೆಹಲಿ: ದೇಶದಲ್ಲಿ ಹೆಮ್ಮಾರಿ ಸೋಂಕು ಕೊರೊನಾದಿಂದ ಅನೇಕ ಮನೆಯ ದೀಪಗಳು ನಂದಿಹೋಗಿವೆ. ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಸದ್ಯ ಆಪ್ತರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿರುವುದಕ್ಕೆ ಸುಪ್ರೀಂ ಮೆಚ್ಚುಗೆ ವ್ಯಕ್ತಪಡಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಕೊವಿಡ್ -19 ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂ ಪರಿಹಾರ ನೀಡಬೇಕೆಂದು ಶಿಫಾರಸು ಮಾಡಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸನ್ನದ್ಧತೆಗೆ ಸಂಬಂಧಿಸಿದ ಕೊವಿಡ್ -19 ಪರಿಹಾರ ಕಾರ್ಯಾಚರಣೆಗಳು ಅಥವಾ ಚಟುವಟಿಕೆಗಳಲ್ಲಿ ಭಾಗಿಯಾಗಿ ವೈರಸ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗುವುದು ಎಂದು ಅದು ಹೇಳಿತ್ತು.

ಕೋವಿಡ್ ಸಾಂಕ್ರಾಮಿಕಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಮಾಡಿದ್ದನ್ನು ಬೇರೆ ಯಾವುದೇ ದೇಶವು ನಿರ್ವಹಿಸಲು ಸಾಧ್ಯವಾಗಲಿಲ್ಲ ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಗುರುವಾರ ಸರ್ಕಾರದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದೆ. ಅದೇ ವೇಳೆ ಕೊವಿಡ್-19 ಸಾವಿಗೆ ಪ್ರಸ್ತಾಪಿಸಿದ 50,000 ರೂ ಪರಿಹಾರ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಎಎಸ್ ಬೋಪಣ್ಣ ಅವರ ಪೀಠ, 'ಇಂದು ನಾವು ತುಂಬಾ ಸಂತೋಷವಾಗಿದ್ದೇವೆ. ತೊಂದರೆ ಅನುಭವಿಸಿದ ವ್ಯಕ್ತಿಗಳಿಗೆ ಸ್ವಲ್ಪ ಸಾಂತ್ವನ ಸಿಗುತ್ತದೆ. ಸರ್ಕಾರ ನಡೆಸುತ್ತಿರುವ ಎಲ್ಲ ಕಾರ್ಯದ ಬಗ್ಗೆಯೂ ಖುಷಿಯಾಗಿದೆ. ಬಳಲುತ್ತಿರುವ ವ್ಯಕ್ತಿಯ ಕಣ್ಣೀರು ಒರೆಸಲು ಏನಾದರೂ ಮಾಡಲಾಗುತ್ತಿದೆ ಎಂದು ನಮಗೆ ಸಂತೋಷವಾಗಿದೆ ಎಂದು ಹೇಳಿತು.

Edited By : Nirmala Aralikatti
PublicNext

PublicNext

24/09/2021 08:09 am

Cinque Terre

50.51 K

Cinque Terre

8

ಸಂಬಂಧಿತ ಸುದ್ದಿ