ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕಾರಿನ ವಿಚಾರದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಯತ್ನ: ಪೊಲೀಸ್ ಸಿಬ್ಬಂದಿ ಸಸ್ಪೆಂಡ್!

ಕಾರು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್ ಅಮಾನತುಗೊಳಿಸಿದ್ದಾರೆ.

ಮಂಜುನಾಥ್ ಸಸ್ಪೆಂಡ್ ಆದ ಪೊಲೀಸ್ ಸಿಬ್ಬಂದಿ. ಕಾರು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಅವರು ಈ ಆದೇಶ ಮಾಡಿದ್ದಾರೆ.

ಘಟನೆ ಹಿನ್ನೆಲೆ ಏನು...?

ವ್ಯಕ್ತಿಯೊಬ್ಬರನ್ನು ಎಳೆದು ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಕುರಿತಂತೆ ಅವರನ್ನು ಅಮಾನತು ಮಾಡಲಾಗಿದೆ. ಕಾರು ಕಳವು ಪ್ರಕರಣ ಸಂಬಂಧಪಟ್ಟಂತೆ ಈ ಹಿಂದೆ 2022ರ ಮೇ 18ರಂದು ಹರೀಶ್ ಎಂಬುವವರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹದಡಿಯ ಪೊಲೀಸ್ ಠಾಣೆಯ ಸಿಬ್ಬಂದಿ ಮಂಜುನಾಥ್ ಎಂಬುವರು ವಿಶಾಖ್ ಬಳಿ ನನಗೆ ಬಳಕೆಗೆ ಕಾರು ಬೇಕು ಎಂದಾಗ ಬ್ರಿಜಾ ಕಾರನ್ನು ನೀಡಿದ್ದು ಅದನ್ನು ಮಂಜುನಾಥ್ ಬಳಕೆ ಮಾಡಿಕೊಳ್ಳುತ್ತಿದ್ದರು. ಇದೇ ವೇಳೆ ಗಿರೀಶ್ ಎಂಬವರು ವಿದ್ಯಾನಗರದ ಕಾಫಿ ಡೇ ಬಳಿ ಹೋಗುವಾಗ ತಮ್ಮ ಕಾರು ನೋಡುತ್ತಿದ್ದಂತೆಯೇ ವೀಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಮಂಜುನಾಥ್ ಬಂದು ಯಾಕೆ ವೀಡಿಯೋ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಇದು ನನ್ನ ಕಾರು. ನಿಮ್ಮ ಬಳಿ ಹೇಗೆ ಬಂತು ಎಂದು ಗಿರೀಶ್ ಅವರು ಕೇಳಿದ್ದಾರೆ. ಆಗ ಇದನ್ನು ಕೇಳಲು ನೀನ್ಯಾರು ಎಂದು ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಇದು ವೀಡಿಯೋದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದರು.

Edited By :
PublicNext

PublicNext

09/06/2022 08:16 pm

Cinque Terre

49 K

Cinque Terre

3

ಸಂಬಂಧಿತ ಸುದ್ದಿ