ಬೆಂಗಳೂರು: ವಾಹನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 900 ರೂಪಾಯಿ ಇದ್ದ ತೆರಿಗೆಯನ್ನು 700 ರೂಪಾಯಿಗೆ ಇಳಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ ತೆರಿಗೆಯನ್ನು 700 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮದ ಅಡಿಯಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ.
ರಾಜ್ಯ ಟ್ರಾವೆಲ್ ಆಪರೇಟರ್ ಗಳ ಸಂಘ, ಪ್ರವಾಸಿ ವಾಹನ ಮಾಲೀಕರ ಸಂಘ, ಮ್ಯಾಕ್ಸಿಕ್ಯಾಬ್ ಮಾಲೀಕರ ಸಂಘ ಸೇರಿದಂತೆ ಹಲವಾರು ವಾಹನ ಮಾಲೀಕರು ಮತ್ತು ಚಾಲಕರ ಸಂಘಗಳಿಂದ ಸರ್ಕಾರಕ್ಕೆ ಈ ಕುರಿತಾಗಿ ಮನವಿ ಸಲ್ಲಿಸಲಾಗಿತ್ತು. ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
30/09/2020 08:50 am