ವಿಜಯಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲಿಸಿ ವಿಜಯಪುರದಲ್ಲಿ ‘ರೈಲು ರೋಕೋ’ಗೆ ಮುಂದಾಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ರೇಲ್ವೆ ನಿಲ್ದಾಣಕ್ಕೆ ಆಗಮಿಸಿದ ರೈತರು ನಿಲ್ದಾಣದ ಒಳಗೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದು, ಪ್ರವೇಶ ದ್ವಾರಕ್ಕೆ ಬ್ಯಾರಿಕೇಡ್ ಹಾಕಿದ್ದಾರೆ. ರೈಲ್ವೆ ಪೊಲೀಸರು ‘ರೈಲು ರೋಕೋ’ ಚಳುವಳಿಗೆ ಅಡ್ಡಿಪಡಿಸಿದ್ದರಿಂದ ಕೇಂದ್ರ ರೈಲ್ವೆ ನಿಲ್ದಾಣದ ಎದುರೇ ಪ್ರತಿಭಟನೆಗೆ ಸಂಘಟನೆಗಳು ಮುಂದಾದವು.
ರೈಲ್ವೇ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರರು ಪ್ರತಿಭಟನೆಗೆ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಸವ ಎಕ್ಸ್ಪ್ರೆಸ್ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರ ಕಾವಲಿನ ನಡುವೆಯೂ ಪ್ರತಿಭಟನಾಕಾರರು ರೈಲನ್ನ ತಡೆಯಲು ಮುಂದಾದರು. ಹೀಗಾಗಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
PublicNext
18/02/2021 11:01 am