ಬೆಂಗಳೂರು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿಗಾಗಿ ಅರ್ಜಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರು. ಈ ಅರ್ಜಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಹೀಗಾಗಿ ಭಾಸ್ಕರ್ ರಾವ್ ಅವರು ಡಿಸೆಂಬರ್ 31ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ.
2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಐಪಿಎಸ್ ಅಧಿಕಾರಿ, ಆ ಬಳಿಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಗೊಂಡಿದ್ದರು. ಈ ಬಳಿಕ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಹೊಂದುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಮನವಿಗೆ ಈಗ ಸರ್ಕಾರ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.
PublicNext
29/12/2021 03:48 pm